ಮಚ್ಚಿನ ಗ್ರಾಮದ ರುದ್ರಭೂಮಿ ಬಳಿ ಆಕಸ್ಮಿಕ ಅಗ್ನಿ ಅವಘಡ

0

ಮಚ್ಚಿನ: ಮಚ್ಚಿನ ಗ್ರಾಮದ ಕೊರೋಡಿ ಕಾರಂದೂರು ರುದ್ರಭೂಮಿ ಸಮೀಪ ಮೇ.5 ರಂದು ರಾತ್ರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ರುದ್ರಭೂಮಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು, ಸ್ಥಳೀಯ ಗ್ರಾಮಸ್ಥರ ಸಕ್ರಿಯ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

LEAVE A REPLY

Please enter your comment!
Please enter your name here