ಉಜಿರೆಯ ರಾಜೇಶ್ ಪೈ ಅವರಿಗೆ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಪ್ರದಾನ

0

ಬೆಂಗಳೂರು: ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಉಜಿರೆಯ ಖ್ಯಾತ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜೇಶ್ ಪೈ ಅವರಿಗೆ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪ್ರಶಸ್ತಿ ಪ್ರದಾನ ಮಾಡಿ, ರಾಜೇಶ್ ಪೈ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು, ಪ್ರಶಸ್ತಿ ವಿಜೇತರಿಗೆ ಶುಭ ಹಾರೈಸಿದರು. ರಾಜೇಶ್ ಪೈ ಅವರ ಈ ಸಾಧನೆಗೆ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here