








ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ವಿರುದ್ಧ ಕೃತಕ ಬುದ್ದಿಮತ್ತೆ ಬಳಕೆ ಮಾಡಿ ಮಾನಹಾನಿ ಉಂಟು ಮಾಡುವ ಫೋಟೊ ಮತ್ತು ವಿಷಯಗಳನ್ನು ಸೃಷ್ಟಿಸಿ ಹಂಚಿಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿರುವ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ರಾಜ್ಯ ಸರಕಾರ ಹಾಗೂ ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ನ್ಯಾಯಪೀಠ ರಾಜ್ಯ ಸರಕಾರ ಹಾಗೂ ಸಾಮಾಜಿಕ ಜಾಲತಾಣ ವೇದಿಕೆಗಳಾದ ಗೂಗಲ್, ಫೇಸ್‌ಬುಕ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಂಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.








