ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ

0

ಬೆಳ್ತಂಗಡಿ: ಮೂಲತಃ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದವರಾಗಿದ್ದು ಬೆಳ್ತಂಗಡಿಯಲ್ಲಿ ಉದ್ಯಮಿಯಾಗಿದ್ದ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿತರಾಗಿರುವ ಅವರ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಷೆನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಮಾ. ೨೨ರಂದು ಸುದೀಪ್ ರೈ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿಗೆ ಸೌಮ್ಯ ಶೆಟ್ಟಿಯೇ ಕಾರಣ ಎಂದು ಸುದೀಪ್ ಅವರ ತಂದೆ ದಾಮೋದರ್ ರೈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಕಲಾವಿದೆ ಸೌಮ್ಯ ಶೆಟ್ಟಿಯನ್ನು ಎ. ೧೧ರಂದು ಉಡುಪಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿಗಾಗಿ ಸೌಮ್ಯ ಶೆಟ್ಟಿ ಉಡುಪಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಕಾರ್ಕಳ ವೃತ್ತ ನಿರೀಕ್ಷಕ ಮಂಜಪ್ಪ ನೇತೃತ್ವದಲ್ಲಿ ತನಿಖೆ ನಡೆದಿದ್ದು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಪ್ರಾಸಿಕ್ಯೂಶನ್ ಪರ ವಾದಿಸಿದ್ದರು.

LEAVE A REPLY

Please enter your comment!
Please enter your name here