






ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಜಯನಗರ-ಗುರಿಪಲ್ಲ ಇವರ ಜಂಟಿ ಆಶ್ರಯದಲ್ಲಿ, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮೇ 17, ಭಾನುವಾರ ಬೃಹತ್ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.


ಜಯನಗರದ ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:30 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಶಿಬಿರದ ಉದ್ಘಾಟನೆಯನ್ನು ಉಜಿರೆಯ ಬೆನಕ ಹೆಲ್ತ್ ಸೆಂಟರ್ನ ಆಡಳಿತ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಕೆ. ನೆರವೇರಿಸಲಿದ್ದಾರೆ.
ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾನಂದ ಪೂಜಾರಿ, ಕೋಡೆಕ್ಕಲ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ. ಮುಖ್ಯ ಅತಿಥಿಗಳಾಗಿ ಡಾ. ವಿಶ್ವ ವಿಜೇತ್, ಡಾ. ಗಣೇಶ್ ಪ್ರಸಾದ್, ಡಾ. ಆದರ್ಶ್ ಕೆ. ಎಸ್. ಮತ್ತು ಪ್ರಕಾಶ್ ಫೆರ್ನಾಂಡಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.









