








ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹುದ್ದೆಗೆ ಶಿವಶರಣ ಎಂ. ಅವಜಿ ಎಂಬವರು ಆಗಮಿಸಲಿದ್ದಾರೆ. ರಾಜ್ಯಾದ್ಯಂತ ಮೇ. 10ರಂದು 293 ಪೊಲೀಸ್ ಇನ್ಸ್‌ಪೆಕ್ಟರ್(ಸಿವಿಲ್)ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದ್ದು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ಶಿವಶರಣ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.









