







ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದಲ್ಲಿರುವ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಮೇ 16ರ ಶನಿವಾರ ಸಂಜೆ ಸಿಡಿಲು ಬಡಿದಿದೆ.


ಬೃಹತ್ ಬಂಡೆಯ ತುದಿಯ ಮೇಲಿರುವ ಈ ಐತಿಹಾಸಿಕ ದೇವಸ್ಥಾನಕ್ಕೆ ಸಂಜೆ ಸುಮಾರು 5 ಗಂಟೆಯ ಹೊತ್ತಿಗೆ ಸಿಡಿಲು ಅಪ್ಪಳಿಸಿದೆ ಎಂದು ಅಂದಾಜಿಸಲಾಗಿದೆ.
ಎತ್ತರದ ಗುಡ್ಡದ ಮೇಲಿದ್ದರೂ, ಸಿಡಿಲು ಬಡಿದ ಸಂದರ್ಭದಲ್ಲಿ ಗರ್ಭಗುಡಿ ಹಾಗೂ ಆವರಣದ ಸುತ್ತಮುತ್ತ ಸಾರ್ವಜನಿಕರಾಗಲಿ, ಭಕ್ತರಾಗಲಿ ಯಾರೂ ಇರಲಿಲ್ಲ. ಈ ಕಾರಣದಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.









