ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್‌ನ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಜಗದೀಶ್ ಲಾಯಿಲ ಆಯ್ಕೆ

0

ಬೆಳ್ತಂಗಡಿ: ಸದಾ ಸಮಾಜಮುಖಿ ಚಟುವಟಿಕೆಗಳು ಹಾಗೂ ವಿಶಿಷ್ಟ ಪರಿಕಲ್ಪನೆಗಳೊಂದಿಗೆ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ‘ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು’ ಘಟಕದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.

ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಅವರ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಸಾರಥಿಗಳನ್ನು ಘೋಷಿಸಲಾಗಿದೆ.

ನೂತನ ಪದಾಧಿಕಾರಿಗಳ ವಿವರ:ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ್ ಲಾಯಿಲ ಹಾಗೂ ಉಪಾಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಕರಾಯ, ಜೊತೆ ಕಾರ್ಯದರ್ಶಿಯಾಗಿ ವಿನೋದ್ ಗುರಿಗಂಡ ಹಾಗೂ ಕೋಶಾಧಿಕಾರಿಯಾಗಿ ಪ್ರವೀಣ್ ಆಚಾರ್ಯ ಗುರುವಾಯನಕೆರೆ ಇವರುಗಳನ್ನು ಸರ್ವಾನುಮತದಿಂದ ಆರಿಸಲಾಗಿದೆ.ಉಳಿದಂತೆ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಜವಾಬ್ದಾರಿಗಳನ್ನು ಹಂಚಲಾಗಿದ್ದು, ವಿವರ ಹೀಗಿದೆ:ಪ್ರಧಾನ ಸಂಚಾಲಕರು: ಪ್ರಶಾಂತ್ ಗುರುವಾಯನಕೆರೆ, ಸಹ ಸಂಚಾಲಕರು: ಸಂತೋಷ್ ಉಜಿರೆ, ಸಂಘಟನಾ ಪ್ರಮುಖರು: ದೇವರಾಜ್ ಪೂಜಾರಿ ಉಜಿರೆ, ಸಾಮಾಜಿಕ ಜಾಲತಾಣ ಪ್ರಮುಖರು: ಶರತ್ ಕೆ.ಎಸ್.ಕ್ರೀಡಾ ಕಾರ್ಯದರ್ಶಿ: ಗಣೇಶ್ ಲಾಯಿಲವಿದ್ಯಾರ್ಥಿ ಪ್ರಮುಖರು: ಸಂದೇಶ್ ರಂಕೇದಗುತ್ತುಈ ಮಹತ್ವದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ಸಂದರ್ಭದಲ್ಲಿ ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷರು ಸೇರಿದಂತೆ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಸಮಾಜಮುಖಿ ಕಾರ್ಯವೈಖರಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here