







ಬೆಳ್ತಂಗಡಿ : ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ದಿಡುಪೆಯ ಕಡಮಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದರು ಈ ವೇಳೆಯಲ್ಲಿ ಮೂವರು ಯುವಕರು ಲೈಂಗಿಕ ಕಿರುಕುಳ ನೀಡಿದ ಘಟನೆ ಮೇ. 20 ಸಂಜೆ ಬೆಳಕಿಗೆ ಬಂದಿದೆ.


ಘಟನೆಗೆ ಸಂಬಂಧಿಸಿ ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೇ 20.2026ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತಕ್ಕೆ ಮಂಗಳೂರಿನಿಂದ ಮೂವರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಕರೆದುಕೊಂಡು ಬಂದು ಜಲಪಾತ ವೀಕ್ಷಣೆಯ ಸಂದರ್ಭದಲ್ಲಿ ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ.
ಯುವಕರು ಎಸಗಿದ ಕೃತ್ಯಕ್ಕೆ ಸಂತ್ರಸ್ತ ಯುವತಿಯರು ಪ್ರತಿರೋಧ ವ್ಯಕ್ತಪಡಿಸಿದ್ದು ಸ್ಥಳದಲ್ಲಿದ್ದ ಸಾರ್ವಜನಿಕರು ನೋಡಿ ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ.ಮಾಹಿತಿ ತಿಳಿದು ಮಧ್ಯೆ ಪ್ರವೇಶಿಸಿದ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು ಈ ಬಗ್ಗೆಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನುಕ್ರಮ ಕೈಗೊಂಡಿದ್ದಾರೆ.









