ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಜೇಶ್ ನೆಲ್ಯಾಡಿ, ಕಾರ್ಯದರ್ಶಿಯಾಗಿ ಲಕ್ಷ್ಮೀಕಾಂತ ಬೇಕಲ್

0

ಬೆಳ್ತಂಗಡಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಂಡಿದ್ದು ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ಘಟಕದ 2026-2031ರ ಅವಧಿಗೆ ನೂತನ ಅಧ್ಯಕ್ಷರಾಗಿ ರಾಜೇಶ್ ನೆಲ್ಯಾಡಿ, ಕಾರ್ಯದರ್ಶಿಯಾಗಿ ಲಕ್ಷ್ಮೀಕಾಂತ್ ಬೇಕಲ್, ಕೋಶಾಧಿಕಾರಿ ರಮೇಶ್ ಎಂ., ಉಪಾಧ್ಯಕ್ಷರಾಗಿ ಗಂಗಾರಣಿ ನಾ ಜೋಶಿ, ಸಹ ಕಾರ್ಯದರ್ಶಿಯಾಗಿ ನಿರಂಜನ, ಸಂಘಟಾನ ಕಾರ್ಯದರ್ಶಿಯಾಗಿ ಸೌಮ್ಯ ಎಂ. ಆಯ್ಕೆಗೊಂಡಿದ್ದಾರೆ. ಜಿಲ್ಲಾ ಕೋಶಾಧಿಕಾರಿಯಾಗಿ ಸುರೇಶ್ ಎಂ. ಹಾಗೂ ಉಪಾಧ್ಯಕ್ಷರಾಗಿ ಆರತಿ ಕುಮಾರಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here