







ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ (ರಿ) ಹಾಗೂ ಪ್ರಸನ್ನ ಆಯುರ್ವೇಧಿಕ ಮೆಡಿಕಲ್ ಕಾಲೇಜು ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 21 ರಂದು ಪ್ರಸನ್ನ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.
ಬೆಳ್ತಂಗಡಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ಗೌರವಾನ್ವಿತ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್. ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಲೋಶಿಯಸ್ ಎಸ್. ಲೋಬೋ ಹಾಗೂ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಅವರು ಕಾನೂನು ಜಾಗೃತಿ ಮತ್ತು ನಾಗರಿಕರ ಹಕ್ಕುಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಬಿ. ಕೆ. ಪ್ರಶಾಂತ್ ವಹಿಸಿದ್ದರು.


ಉದ್ಘಾಟನೆಯನ್ನು ವಿಜಯೇಂದ್ರ ಟಿ. ಹೆಚ್. ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕಾನೂನು ಅರಿವು ಕುರಿತು ಮಾಹಿತಿ ಪಡೆದುಕೊಂಡರು.ಸಂಪನ್ಮೂಲ ವ್ಯಕ್ತಿಯಾಗಿ ಹೇಮಂತ ಮಡವ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾನೂನು ಅರಿವು ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯವಾಗಿದೆ ಎಂದು ತಿಳಿಸಿದರು.
ವಿವಿಧ ಕಾನೂನು ಸೇವೆಗಳ ಸೌಲಭ್ಯಗಳ ಕುರಿತು ಅವರು ವಿವರಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಲಾಯಿತು.









