ಬಂಟರ ಯಾನೆ ನಾಡವರ ಮಾತೃ ಸಂಘ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಕಿರಣ್ ಕುಮಾರ್ ಶೆಟ್ಟಿ; ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

0

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಬೆಳ್ತಂಗಡಿ ತಾಲೂಕು ಸಮಿತಿ ಸಭೆ ಮೇ 20 ರಂದು ಜಯರಾಮ ಶೆಟ್ಟಿ ಮುಂಡಾಡಿಗುತ್ತು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು.

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ 108 ನೇ ವರ್ಷದ ಕಾರ್ಯಕಾರಿ ಸಮಿತಿಗೆ ಅವಿರೋಧವಾಗಿ ಆಯ್ಕೆಯಾದ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಕಿರಣ್ ಕುಮಾರ್ ಶೆಟ್ಟಿ ಜೈನ್‌ಪೇಟೆ, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಸುಜಾತ ಶೆಟ್ಟಿ ಪೆರಿಂಜೆ ಇವರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಮುಂದಿನ ಸಾಲಿನ ಮಾತೃ ಸಂಘದ ಸಂಚಾಲಕರಾಗಿ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ ಜೈನ್‌ಪೇಟೆ ಇವರನ್ನು ಪುನರಾಯ್ಕೆಗೊಳಿಸಲಾಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಆಡಳಿತ ಮಂಡಳಿಗೆ ಬೆಳ್ತಂಗಡಿ ತಾಲೂಕಿನಿಂದ ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷರು, ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ, ಅಜಿತ್ ಜಿ. ಶೆಟ್ಟಿ ಅಧ್ಯಕ್ಷರು, ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಪುಷ್ಪರಾಜ್ ಶೆಟ್ಟಿ ಪೂರ್ವಾಧ್ಯಕ್ಷರು, ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here