







ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೇಸ್ ಸ್ಟಡಿ ಹಾಗೂ ಅದಕ್ಕೆ ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು.


ಈ ಕಾರ್ಯಾಗಾರವನ್ನು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಪ್ರಾಂಶುಪಾಲ ಡಾ . ವಿಶ್ವನಾಥ್ .ಪಿ ದೀಪ ಪ್ರಜ್ವಲಿಸಿ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರುಶಿಕ್ಷಕರ ಜವಾಬ್ದಾರಿ, ಶಿಕ್ಷಕರಿಗೆ ಬೇಕಾದ ಕೌಶಲಗಳು, ವಿದ್ಯಾರ್ಥಿಗಳನ್ನು ತಯಾರು ಮಾಡುವ ರೀತಿ,ಶಿಕ್ಷಕರ ಪಾತ್ರ ಏನು ಎಂಬಿತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು. ಮಂಗಳೂರಿನ ಸೈಂಟ್ ಆಗ್ನೆಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರು ಡಾ.ಕಾವ್ಯಶ್ರೀ ಕೆ.ಬಿ. ಮಾತನಾಡಿ ಕಾರ್ಯಾಗಾರದ ರೂಪು ರೇಷೆಗಳ ಕುರಿತು ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಶಿಕ್ಷಕರಿಗೆ ಕಾರ್ಯಾಗಾರದ ಅಗತ್ಯತೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಹಶಿಕ್ಷಕಿ ಗೀತಾ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕಾವ್ಯ ಸ್ವಾಗತಿಸಿ, ರಮಾರಾಜೇಶ್ ಧನ್ಯವಾದವಿತ್ತರು. ಮನಿಷಾ ಈ ಕಾರ್ಯಾಗಾರಕ್ಕೆ ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಆಗಿರುವ ಹೇಮಲತಾ ಎಂ.ಆರ್ ಉಜಿರೆ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಇಲ್ಲಿನ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.









