






ಬೆಳ್ತಂಗಡಿ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನು ಬಾಹಿರವಾಗಿ ಗೋಮಾಂಸ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಬಲಿ (ಕುರ್ಬಾನಿ) ನಡೆಯುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಮೇ.26 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.


ಮನವಿಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ–2020 ಹಾಗೂ ಜಾನುವಾರು ಸಾಗಾಟ ನಿಯಮಾವಳಿ–2021 ಅನ್ವಯ ಗೋವಂಶಗಳ ಅಕ್ರಮ ಸಾಗಾಣಿಕೆ, ಹತ್ಯೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕುರ್ಬಾನಿಯನ್ನು ತಡೆಗಟ್ಟಲು ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ಬಜರಂಗದಳ ಸಾಪ್ತಾಹಿಕ ಮಿಲನ್ ಮೋಹನ್ ನಡ, ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ, ಜಯಾನಂದ ಕಲ್ಮಂಜ ,ರಾಘವೇಂದ್ರ ಉಂಕ್ರೊಟ್ಟು ಉಪಸ್ಥಿತರಿದ್ದರು.









