






ಬೆಳ್ತಂಗಡಿ: ಭಾರತದ 15ನೇ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಟನ್ ಅವರು ಬೆಳ್ತಂಗಡಿಗೆ ಭೇಟಿ ನೀಡಲಿದ್ದು ಈ ಸಮಯದಲ್ಲಿ ಅವರು ಕಾರ್ಯಕ್ರಮೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮೇ. 26ರಂದು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಉಪರಾಷ್ಟ್ರಪತಿಗಳ ಭೇಟಿಯ ಹಿನ್ನಲೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಯಾ ಆಯಾ ಅಧಿಕಾರಿಗಳ ಕರ್ತವ್ಯದ ಬಗ್ಗೆ ಸೂಕ್ತ ಸೂಚನೆ ಹಾಗೂ ಸಲಹೆಗಳನ್ನು ನೀಡಿದ್ದೇನೆ. ಎಲ್ಲಾ ಜಿಲ್ಲೆಯಲ್ಲಿ ಮೂಡದ ಸಮಸ್ಯೆ ಇದೆ. ಬೆಳ್ತಂಗಡಿ ತಾಲೂಕಿನ ಮೂಡದ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮೀಟಿಂಗ್ ಮಾಡಿದ್ದಾರೆ. ಹೊಸ ನೇಮಕಾತಿ ಆಗುವ ತನಕ ಸ್ವಲ್ಪ ಸಮಸ್ಯೆ ಇದೆ ಎಂದರು. ಸ್ವಯಂ ಇಚ್ಛೆಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಒಳಗಿರುವ ಕುಟುಂಬದಿಂದ ಸ್ಥಳಾಂತರಗೊಳ್ಳಲು ಮುಂದೆ ಬರುತ್ತಾರೆ ಅವರಿಗೆ ಪರಿಹಾರ ನೀಡಲಾಗಿದೆ ಹೊರತು ಯಾವುದೇ ಬಲವಂತದಿಂದ ಒಕ್ಕಲೆಬ್ಬಿಸುವ ಕೆಲಸ ನಡೆದಿಲ್ಲ ಈ ಬಗ್ಗೆ ಗೊಂದಲ ಬೇಡ ಎಂದರು.


ಪಡಿತರ ಚೀಟಿ ಸಂಬಂಧಿಸಿದಂತೆ ಏನದರೂ ಸಮಸ್ಯೆ ಇದ್ದಾರೆ ಪರಿಶೀಲನೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಮತ್ತು ಪೊಲೀಸ್ ಆಯುಕ್ತ ಅರುಣ್ ಕುಮಾರ್ ಅವರು ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳ್ತಂಗಡಿಗೆ ಮೊದಲ ಭೇಟಿ…ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೆಳ್ತಂಗಡಿ ತಾಲೂಕಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಈ ಹಿಂದೆ ಕೂತ್ಲೂರಿಗೆ ಬಂದಿದ್ದೆ. ಮುಂದೆ ಬುರತ್ತೇನೆ. ಮಳೆಗಾಲದ ಪೂರ್ವಭಾವಿ ಸಭೆ ನಡೆಸುತ್ತೇನೆ ಹಾಗೇಯೆ ಸಾರ್ವಜನಿಕರ ಸಮಸ್ಯೆಗಳನ್ನು ಅಳಿಸುವುದಾಗಿ ಪ್ರತಿಕ್ರಿಯೆ ನೀಡಿದರು.









