ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿಯ ಪದ್ಮಪ್ರಿಯ ಅವರಿಗೆ ಕಥಕಳಿ ನೃತ್ಯದಲ್ಲಿ ಪ್ರಥಮ ಸ್ಥಾನ

0

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಮೇ 24 ರಂದು ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಪದ್ಮಪ್ರಿಯ. ಡಿ ಅವರು ಕಥಕಳಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.

ಇವರು ಬೆಳ್ತಂಗಡಿಯ ಸಹಾಯಕ ಸರಕಾರಿ ಅಭಿಯೋಜಕರ ಕಚೇರಿಯಲ್ಲಿ ಬೆರಳಚ್ಚುಗಾರ್ತಿ ಹಾಗೂ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ತವ್ಯದ ನಡುವೆಯೂ ಕಲೆಯ ಮೇಲಿನ ಆಸಕ್ತಿಯಿಂದ ಅವರು ತೋರಿದ ಈ ಅಪೂರ್ವ ಪ್ರತಿಭೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here