






ಬೆಳ್ತಂಗಡಿ: ತಾಲೂಕಿನ ಕಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉರುವಾಲು ಪದವು ಗ್ರಾಮದ ಮುಖ್ಯ ರಸ್ತೆಯ ರಾಜಮಂದಿರ ಕ್ರಾಸ್ ಬಳಿ ನೂತನ ಕೊಳವೆ ಬಾವಿ (ಬೋರ್‌ವೆಲ್) ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಸಂತಸ ತಂದಿದೆ.


ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜಾ ಅವರ ವಿಶೇಷ ಅನುದಾನದಡಿ ಈ ಕೊಳವೆ ಬಾವಿ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಗ್ರಾಮಸ್ಥರ ದೀರ್ಘಕಾಲದ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಂತಾಗಿದೆ. ದೇವತಾ ಕೃಪೆಯಿಂದ ಗಂಗೆಯ ಅನುಗ್ರಹವಾಗಿ ನೀರಿನ ಕನಸು ಸಾಕಾರಗೊಂಡಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಕುಡಿಯುವ ನೀರಿಗೆ ಆದ್ಯತೆ ನೀಡಿ ಅನುದಾನ ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ಉರುವಾಲು ಪದವು ಗ್ರಾಮಸ್ಥರು ಹೃತ್ಪೂರ್ವಕ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.









