







ಗೇರುಕಟ್ಟೆ: ಇಲ್ಲಿನ ಸರಕಾರಿ ಪ್ರೌಢಶಾಲೆ ಸೇವೆಯಿಂದ ವಯೋನಿವೃತ್ತಿಗೊಂಡ ಶಿಕ್ಷಕಿ ಈಶ್ವರಿ ಕೆ ಇವರ ಬೀಳ್ಕೊಡುಗೆ ಸಮಾರಂಭವು ಮೇ.30 ರಂದು ನಡೆಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಈಶ್ವರಿ ಕೆ ಇವರು ತಮ್ಮ ಸುಧೀರ್ಘ ವೃತ್ತಿಜೀವನದ ಅನುಭವಗಳನ್ನು ಮೆಲುಕು ಹಾಕಿದರು ಹಾಗೂ ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಉಪ ಪ್ರಾಂಶುಪಾಲರಾಗಿ ಸಲ್ಲಿಸಿದ ಸೇವೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಅಂತೆಯೇ ಸಹಕರಿಸಿದ ಎಲ್ಲರ ಸಹಕಾರವನ್ನು ಸ್ಮರಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಯ ಕಾರ್ಯಧ್ಯಕ್ಷರಾದ ಗೋಪಾಲಗೌಡ ವಹಿಸಿದ್ದರು ಕಾರ್ಯಕ್ರಮದಲ್ಲಿ ಕಳಿಯ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಂಞಿ, ಸಹಕಾರ ಭಾರತಿಯ ತಾಲೂಕು ಮಾಜಿ ಅಧ್ಯಕ್ಷ ರಾಜೇಶ್ ಪೆರ್ಮುಡ, ನಾಳ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೇಶವ ಪೂಜಾರಿ ಇವರು ಶುಭಾಶಯ ಕೋರಿದರು. ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್ ರಿಯಾಜ್ ಇವರ ನೇತೃತ್ವದಲ್ಲಿ ಸಹ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.


ಶಾಲಾ ವತಿಯಿಂದ, ಗ್ರಾಮ ಪಂಚಾಯತ್ ವತಿಯಿಂದ, ಕಾಲೇಜು ವತಿಯಿಂದ ಹಾಗೂ ಅಕ್ಷರ ದಾಸೋಹದ ಸಿಬ್ಬಂದಿಗಳು, ವತಿಯಿಂದ ನಿವೃತ್ತರನ್ನು ಸನ್ಮಾನಿಸಿ ನೆನಪಿನ ಕಾಣಿಕೆಯನ್ನು ನೀಡಿದರು.
ಜ್ಯೋತಿ ಸ್ವಾಗತಿಸಿ, ಶಿಕ್ಷಕ ಅಜಿತ್ ಸನ್ಮಾನ ಪತ್ರ ವಾಚಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿ, ರಮ್ಯಾ ಧನ್ಯವಾದವಿತ್ತರು.









