ಪರಿಶಿಷ್ಟ ಪಂಗಡದ ಮೆಟ್ರಿಕ್‌ ಪೂರ್ವ ಮತ್ತು ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್‌ ಮೂಲಕ ಅರ್ಜಿ ಆಹ್ವಾನ

0

ಬೆಳ್ತಂಗಡಿ: ತಾಲೂಕಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಬೆಳ್ತಂಗಡಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು (ಗ್ರೇಡ್-2) ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9480843113 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here