







ಬೆಳ್ತಂಗಡಿ. ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಮೇರೆಗೆ 275.00ಲಕ್ಷಗಳ ಅನುದಾನ(ಲೆ.ಶೀ.5054-03-101-0-02-132 ಪ್ರಮೂಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ) ಬಿಡುಗಡೆಗೆ ಆದೇಶವಾಗಿದ್ದು . ಅದರೆ ಸದ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು ಮೊತ್ತದಂತೆ ಈ ಕಾಮಗಾರಿಗೆ 499.36 ಲಕ್ಷಗಳ ಅನುದಾನ ಬೇಕಾಗಿದ್ದು.


ಈ ಕಾಮಗಾರಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೆ,’ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರು ಬೆಳ್ತಂಗಡಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಮಾಡಿದ್ದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರುಬೆಳ್ತಂಗಡಿ ತಾಲ್ಲೂಕು ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿ 499.36 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.ಅನುದಾನವನ್ನು ಬಿಡುಗಡೆ ಮಾಡಿದ ಸರ್ಕಾರಕ್ಕೆ ಅಭಿನಂದನೆಗಳು.ರಕ್ಷಿತ್ ಶಿವರಾಂಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ.









