ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ವತಿಯಿಂದ ಕಿಲ್ಲೂರು ಸ. ಪ್ರಾ. ಶಾಲಾ 151ವಿದ್ಯಾರ್ಥಿಗಳಿಗೆ ಪುಸ್ತಕ, ಕಲಿಕಾ ಸಾಮಗ್ರಿ ವಿತರಣೆ

0

ಕಿಲ್ಲೂರು: ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇ0ಬರ್ ವತಿಯಿಂದ ತುಳು ಕೂಟ ಇಸ್ರೇಲ್ ಆಶ್ರಯದಲ್ಲಿ ಕಿಲ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಎಲ್ಲಾ 151 ವಿದ್ಯಾರ್ಥಿಗಳಿಗೆ ಸುಮಾರು ರೂ.1.30 ಲಕ್ಷ ಮೌಲ್ಯದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳ ವಿತರಣಾ ಸಮಾರಂಭ ಜೂ. 1 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಸೀನಿಯರ್ ಛೇಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ ವಹಿಸಿದ್ದರು.ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ, ಕ್ಷೇತ್ರ ಸಂಪಲ್ಮಣಾಧಿಕಾರಿ ಬಸವ ಲಿಂಗಪ್ಪ, ಬಿ ಆರ್ ಸಿ ಸಿದ್ದಲಿಂಗಯ್ಯ, ಬಿ ಆರ್ ಸಿ ಮೋಹನ್, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ವಿನಯಚಂದ್ರ ಸೇನರಬೆಟ್ಟು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತನ್ ಶೆಟ್ಟಿ, ಮಂಜುಶ್ರೀ ಸೀನಿಯರ್ ಛೇoಬರ್ ನಿಕಟಪೂರ್ವ ಅಧ್ಯಕ್ಷ ಎನ್. ಮಂಜುನಾಥ ರೈ, ಜತೆ ಕಾರ್ಯದರ್ಶಿ ಕಾರ್ಯದರ್ಶಿ ಶರತ್ ಕುಮಾರ್, ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ರಮೇಶ್ ಪೈಲಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪುಸ್ತಕ, ಕಲಿಕಾ ಸಾಮಗ್ರಿ ವಿತರಿಸಿದರು.

ವಿತರಣೆಗೆ ಕಾರಣಕರ್ತರಾದ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ, ಸಹಕಾರ ನೀಡಿದ ಜತೆ ಕಾರ್ಯದರ್ಶಿ ಹರೀಶ್ ಶೆಟ್ಟಿ ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು, ಮಂಜುಶ್ರೀ ಸೀನಿಯರ್ ಛೇ0ಬರ್ ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್. ನಾಯಕ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಲ್ಯಾನ್ಸಿ ಪಿರೇರಾ ನಿರೂಪಿಸಿದರು.ಶಿಕ್ಷಕ ಚಂದ್ರಶೇಖರ್ ವಂದಿಸಿದರು.ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹೆತ್ತವರು, ಮಂಜುಶ್ರೀ ಸೀನಿಯರ್ ಛೇ0ಬರ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here