ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸರಳ ಹಾಗೂ ಸುಂದರವಾಗಿ ಜೂ.1 ರಂದು ಆಚರಿಸಲಾಯಿತು.ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ದಾನಿಗಳು ನೀಡಿದ ಸಮವಸ್ತ್ರಗಳನ್ನು ವಿತರಿಸಲಾಯಿತು. ಸಮವಸ್ತ್ರವನ್ನು ಉಚಿತವಾಗಿ ನೀಡಿದ ಹಳೆ ವಿದ್ಯಾರ್ಥಿಗಳಾದ ಉದಯ್ ಅವರ ತಂದೆ ಆನಂದ ಪೂಜಾರಿ, ಅವಿನಾಶ್ ಅವರ ತಂಗಿ ಅಕ್ಷಯ ವಿಶ್ವನಾಥ ದೇವಾಡಿಗ ಹಾಗೂ ಶ್ರೀಕಾಂತ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಪ್ರಸ್ತುತ ಬೇರೆ ಬೇರೆ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಾಗೂ ಕಳೆದ ಪರೀಕ್ಷೆಯಲ್ಲಿ ಶೇಕಡಾ 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ವಹಿಸಿಕೊಂಡಿದ್ದರು. ಶಿಕ್ಷಕಿ ಲತಾ ಅವರು ಪ್ರಾರ್ಥನೆ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ರಮೇಶ್ ಛೌವಣ್ ಅವರು ಸ್ವಾಗತ ಭಾಷಣ ಮಾಡಿದರು. ಸನ್ಮಾನಿತ ವಿದ್ಯಾರ್ಥಿಗಳ ಪಟ್ಟಿಯನ್ನು ಶಿಕ್ಷಕಿ ಸ್ವಾತಿ ಅವರು ವಾಚಿಸಿದರು.

ವೇದಿಕೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿವೇಕ್ ಕೇಳ್ಕರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಸಂಗೀತಾ, ಸಫಿಯಾ ಹಾಗೂ ಬಿಸಿ ಊಟ ನೌಕರರಾದ ಜಯಂತಿ ಮತ್ತು ಚಂದ್ರವತಿ ಸಹಕಾರ ನೀಡಿದರು.ಶಾಲಾ ಶಿಕ್ಷಕಿ ತಸ್ಮಿಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಶಿಕ್ಷಕಿ ಸಾವಿತ್ರಿ ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here