ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

0

ಬೆಳ್ತಂಗಡಿ, ಜೂನ್ 1: ಬೆಳ್ತಂಗಡಿಯ ದಯಾ ಸ್ಪೆಷಲ್ ಸ್ಕೂಲ್ ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪುನರಾರಂಭ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿಶೇಷ ಮಕ್ಕಳನ್ನು ಶಿಕ್ಷಕರು ಹಾಗೂ ಸಿಬ್ಬಂದಿಗಳು ಆತ್ಮೀಯವಾಗಿ ಸ್ವಾಗತಿಸಿದರು.ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.

ಶಾಲೆಯ ನಿರ್ದೇಶಕರು, ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ವರ್ಷದ ಶುಭಾಶಯಗಳನ್ನು ತಿಳಿಸಿದರು. ಮಕ್ಕಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಸಂಚಾಲಕರು ಆದಂತಹ ಫಾದರ್ ವಿನೋದ್ ರವರು ಮಾತನಾಡಿ, “ಪ್ರತಿ ಮಗುವಿನ ಸಾಮರ್ಥ್ಯವನ್ನು ಗುರುತಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಶಾಲೆ ಸದಾ ಬದ್ಧವಾಗಿದೆ” ಎಂದು ತಿಳಿಸಿದರು. ಹೊಸ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ತರಬೇತಿ ಹಾಗೂ ಚಿಕಿತ್ಸಾ ಸೇವೆಗಳನ್ನು ಒದಗಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.ಶಾಲೆಗೆ ಆಗಮಿಸಿದ ಮಕ್ಕಳು ತಮ್ಮ ಸಂಸ್ಥೆಯ ಸಿಬ್ಬಂದಿಗಳನ್ನು ಭೇಟಿಯಾಗಿ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಶಿಕ್ಷಕ ವೃಂದ, ಶಿಕ್ಷಕೇತರರು , ಹಾಗೂ‌ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here