ಹೋಲಿ ರಿಡೀಮರ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷವನ್ನು ಜೂನ್ 01ರಂದು ಸಂಭ್ರಮದಿಂದ ಪ್ರಾರಂಭಿಸಲಾಯಿತು. ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಸಹಶಿಕ್ಷಕಿಯರು ಸರ್ವಧರ್ಮ ಪ್ರಾರ್ಥನೆ ಹಾಗೂ ಶಾಲಾ ಅಭಿವೃದ್ಧಿಗಾಗಿ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು.

ಶಾಲಾ ಜೊತೆ ಕಾರ್ಯದರ್ಶಿಗಳಾದ ವಂದನೀಯ ಗುರುಗಳು ವಾಲ್ಟರ್ ಡಿಮೆಲ್ಲೋ ಅವರು ಮಕ್ಕಳಲ್ಲಿ ಕಲಿಯುವ ಆಕಾಂಕ್ಷೆ ಇಂದಿನಿಂದಲೇ ಬೆಳೆಯಲಿ ಹಾಗೂ ಅದಕ್ಕೆ ಬೇಕಾದ ಪೂರಕ ವಾತಾವರಣವನ್ನು ಶಾಲೆಯು ಕಲ್ಪಿಸುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಗುರುಗಳು ಕ್ಲಿಫರ್ಡ್ ಪಿಂಟೋರವರು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯು ಸತತ 11ನೇ ಬಾರಿ 100% ಫಲಿತಾಂಶವನ್ನು ದಾಖಲಿಸಿ ಸಾಧನೆ ಮಾಡಿರುತ್ತದೆ ಎಂದರು.

ಈ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ಹೊಸದಾಗಿ ಸೇವೆಗೆ ಸೇರ್ಪಡೆಗೊಂಡ ಶಿಕ್ಷಕರನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ಜೊನಿಟ ಕೊರೆಯ ನಿರೂಪಿಸಿದರು.

LEAVE A REPLY

Please enter your comment!
Please enter your name here