







ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಸಾಲಿನ LKG ಯ ಮಕ್ಕಳಿಗೆ ಜೂ .3 ರಂದು ಬುಧವಾರದಂದು “ಶಾಲಾ ಪ್ರಾರಂಭೋತ್ಸವವನ್ನು” ಶಾಲಾ ಸಭಾಂಗಣದಲ್ಲಿ ಅತ್ಯಂತ ಸಂಭ್ರಮದೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆಯವರು ದೀಪವನ್ನು ಬೆಳಗಿಸುವ ಮೂಲಕ ‘ಶಿಕ್ಷಣದ ಮಹತ್ವದ ಜೊತೆಗೆ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು’ ಹಿತವಚನ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಇವರು ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಿಷ್ಣು ಪ್ರಕಾಶ್ ಇವರು ಆರೋಗ್ಯ ಮತ್ತು ಶಿಸ್ತಿನ ಬಗ್ಗೆ ಪ್ರಮುಖ ಅಂಶಗಳನ್ನು ತಿಳಿಯ ಪಡಿಸಿದರು.
ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಇವರು ಉಪಸ್ಥಿತರಿದ್ದರು.ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಇವರು ಸ್ವಾಗತಿಸಿ ಶಾಲೆಯ ನಿಯಮದ ಬಗ್ಗೆ ಪೋಷಕರಿಗೆ ತಿಳಿಹೇಳಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ ವಂದನಾರ್ಪಣೆಯನ್ನು ಮಾಡಿದರು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ವಂದನಾ ನಿರೂಪಣೆ ಮಾಡಿದರು.









