ಕುಕ್ಕೇಡಿ: ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದಿಂದ ಉಚಿತ ಪುಸ್ತಕ ವಿತರಣೆ

0

ಕುಕ್ಕೇಡಿ: ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ನಿಟ್ಟಡೆಯಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಲೆಕ್ಕಿಗ ಭರತ್ ರಾಜ್ ಅಮೈ ಮಾತನಾಡಿ ವಿದ್ಯಾರ್ಥಿಗಳು ತಮ್ಮಲ್ಲಿ ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಿ ತಾವು ಸಮಾಜದಿಂದ ಏನನ್ನು ಪಡೆದಿದ್ದೆವು ಮುಂದೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸ್ಪಂದಿಸುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.

ಈ ಸಂಘಟನೆಯು ಅನೇಕ ಸಮಾಜ ಮುಖಿ ಕೆಲಸ ಕಾರ್ಯಗಳನ್ನು ಮಾಡುವ ಮುಕಾಂತರ ಸಮಾಜಕ್ಕೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜನಾರ್ಧನ ಪೂಜಾರಿ ಮಾತನಾಡಿ ಸಂಘದಲ್ಲಿ ಪ್ರಾರಂಭದ ಹಂತದಿಂದ ಹಿಡಿದು ಈವರೆಗೂ ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡು ಬಂದಿರುವ ಈ ಸಂಘಟನೆ ಸಮಾಜಕ್ಕೆ ಇನ್ನಷ್ಟು ಕೆಲಸ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ ಅನಿತಾ ಕೆ. ಪಾಣೂರ್ ಮಾತನಾಡಿ ಸಂಘಟನೆ ಮಾಡುವ ಕೆಲಸಕ್ಕೆ ನಮ್ಮ ಸದಾ ಸಹಕಾರ ಇದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನವೀನ್ ಜಿ. ಬುಳೆಕ್ಕರ ಮಾತನಾಡಿ, ಸಂಘದ ಈವರೆಗೆ ನಡೆದ ಸೇವಾ ಚಟುವಟಿಕೆಗಳು ಎಲ್ಲರ ಸಹಕಾರದಿಂದಾಗಿ ನಡೆದಿದೆ ವಿಶೇಷವಾಗಿ ಈ ಒಂದು ಕಾರ್ಯಕ್ರಮಕ್ಕೆ ಪ್ರತಿ ವರ್ಷದಂತೆ ಈ ವರ್ಷವು ಸಂಪೂರ್ಣವಾಗಿ ಸಹಕಾರ ನೀಡುವ ಯಶಲತಾ ಮತ್ತು ಅಮ್ಮಾಜಿ ಪೂಜಾರಿ ಇವರ ಕುಟುಂಬಕ್ಕೆ ಅಭಿನಂದಿಸಿ, ಮುಂದೆಯೂ ನಮ್ಮಿಂದ ಇನ್ನಷ್ಟು ಕೆಲಸ ಕಾರ್ಯಗಳು ನಡೆಯಬೇಕು, ಇದಕ್ಕೆಲ್ಲ ಸಂಘದ ಪ್ರತಿಯೊಬ್ಬ ಸದಸ್ಯರು ಸಹಕಾರ ನೀಡಬೇಕೆಂದು ಕೇಳಿ ಕೊಂಡರು.

ಅಮೂಲ್ಯ, ಅನನ್ಯ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ರತ್ನಾಕರ ಪೂಜಾರಿ ಅಂಕರ್ಜಾಲ್ ಪ್ರಾರ್ಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಮಾಜಿ ಅಧ್ಯಕ್ಷ ಸತೀಶ್ ಕೆ. ಪಡ್ಯೋಡಿ ಬೈಲು, ಯಶಲತಾ ಆಮ್ಮಾಜಿ ಉಪಸ್ಥಿತರಿದ್ದರು ಕಾರ್ಯದರ್ಶಿ ಸುಶಾಂತ್,ಪದ್ಮನಾಭ ಬಿಯದಡಿ, ನಿತಿನ್ ಪಾರೋಟ್ಟು ಹಾಗೂ ಪದಾಧಿಕಾರಿಗಳು ಸಹಕರಿಸಿದರು.

ಸಂಘದ ಮಾಜಿ ಕಾರ್ಯದರ್ಶಿ ರವಿ ಉಲ್ತೂರ್ ಕಾರ್ಯಕ್ರಮ ನಿರೂಪಿಸಿ ಸಂಘದ ಗೌರವಾಧ್ಯಕ್ಷ ಅಮ್ಮಾಜಿ ಪೂಜಾರಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here