






ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದೊಂದಿಗೆ ಜೂ.5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.


ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಗಿಡಗಳನ್ನು ನೆಟ್ಟು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ್ ಜಿ.ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್. ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.









