ತಾಯಿಯ ಗೌರವಕ್ಕೆ ಹಸಿರು ಕಾಣಿಕೆ-ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ

0

ಪಂಡಿಂಜೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಡಿಜೆವಾಳ್ಯದ ವಿದ್ಯಾರ್ಥಿಗಳು ವಿಶೇಷವಾಗಿ “ತಾಯಿಯ ಹೆಸರಿನಲ್ಲಿ ಒಂದು ಸಸಿ” ಎಂಬ ವಿನೂತನ ಕಾರ್ಯಕ್ರಮದ ಮೂಲಕ ಗಿಡವನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ತಾಯಿಯ ಹೆಸರಿನಲ್ಲಿ ಸಸಿಗಳನ್ನು ನೆಡುವ ಮೂಲಕ ತಾಯಿಯ ಮೇಲಿನ ಗೌರವ ಮತ್ತು ಪ್ರಕೃತಿಯ ಮೇಲಿನ ಕಾಳಜಿಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 30 ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕಿ ಪ್ಲೇವಿಯ ಡಿಸೋಜ “ತಾಯಿ ಹೇಗೆ ಮಕ್ಕಳನ್ನು ಪೋಷಿಸುತ್ತಾಳೋ, ಹಾಗೆಯೇ ಮರಗಳು ಜೀವಜಗತ್ತನ್ನು ಪೋಷಿಸುತ್ತವೆ. ತಾಯಿಯ ಹೆಸರಿನಲ್ಲಿ ಸಸಿ ನೆಡುವುದು ಪರಿಸರ ಸಂರಕ್ಷಣೆಯ ಜೊತೆಗೆ ತಾಯಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಉತ್ತಮ ಸಂದೇಶವಾಗಿದೆ” ಎಂದು ಹೇಳಿದರು.

ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಅಂತ್ಯದಲ್ಲಿ ನೆಡಲಾದ ಸಸಿಗಳನ್ನು ಸಂರಕ್ಷಿಸುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.

ಪರಿಸರ ಸಂರಕ್ಷಣೆಯ ಕುರಿತು ಘೋಷಣಾ ವಾಕ್ಯಗಳನ್ನು ಕೂಗಿದರು. ಶಿಕ್ಷಕರು, SDMC ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿ ಪೂರ್ಣಿಮಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ನಾಯಕ ಅಭಿಶ್ ಅವರು ಧನ್ಯವಾದ ಸಮರ್ಪಣೆಯನ್ನು ಮಾಡಿದರು.

LEAVE A REPLY

Please enter your comment!
Please enter your name here