ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಧರ್ಮಸ್ಥಳ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು. ಪರಿಸರ ಸಂಘದ ಶಿಕ್ಷಕರಾದ ಅಮೃತ ವಿ ಶೆಟ್ಟಿ, ಗೀತಾ ಮಕ್ಕಳಿಗೆ ಭತ್ತದ ಬೀಜ ಹೇಗೆ ಬಿತ್ತನೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಹಾಗೆಯೇ ಶಾಲೆಯಲ್ಲಿ ಪರಿಸರಕ್ಕೆ ಸಂಬಂಧಪಟ್ಟ ಚಿತ್ರಕಲೆ, ಹಾಡುಗಳು, ಭಾಷಣ, ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ರಮ ಮಕ್ಕಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿಯನ್ನು ಮೂಡಿಸಿದರು. ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿಯ ಬಗ್ಗೆ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಾಕ್ಷಿಯಾದರು.

LEAVE A REPLY

Please enter your comment!
Please enter your name here