ಉಜಿರೆ ರುಡ್ ಸೆಟ್ ಕೃಷಿ ಉದ್ಯಮಿ , ಕೋಳಿ ಸಾಕಾಣಿಕೆ ತರಬೇತಿ ಸಮಾರೋಪ

0

ಉಜಿರೆ : ಕೃಷಿಯು ಪ್ರತಿಯೊಬ್ಬರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದ್ದು, ಕೃಷಿಯೊಂದಿಗೆ ಪೂರಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆದಾಯ ಗಳಿಸಲು ಸಾಧ್ಯವೆಂದು ಸತತವಾದ ಪ್ರಯತ್ನದೊಂದಿಗೆ ಮುಂದುವರೆಯಿರಿ, ಜಮೀನಿನಲ್ಲಿ ಸಾಧ್ಯವಾದಷ್ಟು ವಿವಿಧ ಕೃಷಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್ ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ ಆಯೋಜಿಸಲಾದ *ಕೃಷಿ ಉದ್ಯಮಿ, ಕೋಳಿ ಸಾಕಾಣಿಕೆ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಿಜಯ್ ಕುಮಾರ್ ಕಾರ್ಯನಿರ್ವಾಹಕ ನಿರ್ದೇಶಕರು, ರುಡ್‌ಸೆಟ್ ಸಂಸ್ಥೆಗಳು, ಕೇಂದ್ರ ಕಛೇರಿ ಉಜಿರೆ ಅವರು ಮಾತನಾಡಿ, ತರಬೇತಿಯ ಮೂಲಕ ಪಡೆದ ಜ್ಞಾನ ಹಾಗೂ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಶಿಬಿರಾರ್ಥಿಗಳಿಗೆ ಪ್ರೇರಣೆ ನೀಡಿದರು.

ನಂತರ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು.ಕಾರ್ಯಕ್ರಮವನ್ನು ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ. ಜೈನ್ ನಿರೂಪಿಸಿದರು.ಕಾರ್ಯಕ್ರಮವು ಲತಾ ಮತ್ತು ಬಳಗದವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಗುರುರಾಜ್ ಜೇಮ್ಸ್, ಹೇಮಾವತಿ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡರು.

LEAVE A REPLY

Please enter your comment!
Please enter your name here