ಎಲ್.ಸಿ.ಆರ್ ವಿದ್ಯಾಸಂಸ್ಥೆ ಕಕ್ಯಪದವು ಪದವಿಪೂರ್ವ ವಿಭಾಗದ 2026-2027ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.) ನಿಂದ ನಡೆಸಲ್ಪಡುವ ಎಲ್ ಸಿ‍ ಆರ್ ಇಂಡಿಯನ್‍ ವಿದ್ಯಾಸಂಸ್ಥೆಯ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಜೂನ್ 15, 2026ರಂದು ಮಧ್ಯಾಹ್ನ 2:00 ಗಂಟೆಗೆ ನಡೆಸಲಾಯಿತು.

ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುವ, ಹಕ್ಕುಗಳನ್ನು ಚಲಾಯಿಸುವ ಹಾಗೂ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸಲುವಾಗಿ ಅವಕಾಶವನ್ನು ಒದಗಿಸಲಾಯಿತು. ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್ ಇವರ ಮೇಲ್ವಿಚಾರಣೆಯಲ್ಲಿ ಹಾಗೂ ಉಪನ್ಯಾಸಕರ ಸಹಕಾರದಿಂದ ಚುನಾವಣಾ ಪ್ರಕ್ರಿಯೆಯನ್ನು ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಸಲಾಯಿತು.

ಚುನಾವಣೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿವಿದ್ಯಾರ್ಥಿಗಳು ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಮತದಾನ ಪ್ರಕ್ರಿಯೆ ಮುಗಿದ ಸ್ವಲ್ಪ ಸಮಯದ ನಂತರ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕನಾಗಿ ಬಿ.ಮಹಮ್ಮದ್ ಅತ್ತಾವುಲ್ಲ ಮತ್ತು ವಿದ್ಯಾರ್ಥಿ ಸಂಘದ ಉಪ ನಾಯಕಿಯಾಗಿ ಚೈತ್ರಾ ಯು.ಎಸ್ ಇವರು ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here