ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ ವಸ್ತುಗಳ ದುಷ್ಪರಿಣಾಮ, ಗಾಂಜಾ ಸೇವನೆಯ ಅಪಾಯ, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಹೇಮಲತಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಂಗಪ್ಪ ಡಿ ಜಕ್ಕಣ್ಣನವರ್ ಪೊಲೀಸ್ ಉಪನಿರೀಕ್ಷಕರು ಸಂಚಾರ ಠಾಣೆ ಬೆಳ್ತಂಗಡಿ ಹಾಗೂ ಶ್ರೀಮತಿ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಭಾಗವಹಿಸಿದರು.ಅತಿಥಿಗಳು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವ, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಬಾಲ್ಯ ವಿವಾಹದ ವಿರುದ್ಧ ಇರುವ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಅವರು ಕರೆ ನೀಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೇಯಾಂಸ ಜೈನ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಚ್.ಆರ್.ಡಿ. ಕ್ಲಬ್‌ನ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here