







ಉಪ್ಪಿನಂಗಡಿ: ನಿರಂತರ ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿದ್ದ ಕುಪ್ಪೆಟ್ಟಿ–ಉಪ್ಪಿನಂಗಡಿ ಲೋಕೋಪಯೋಗಿ (PWD) ರಸ್ತೆಯ ದುಸ್ಥಿತಿಯನ್ನು ಸ್ಥಳೀಯ ಶಾಸಕರ ಪರಿಶೀಲಿಸಿದ್ದು, ಸಾರ್ವಜನಿಕರ ಸಂಚಾರಕ್ಕೆ ಎದುರಾಗಿದ್ದ ತೊಂದರೆಯನ್ನು ನಿವಾರಿಸಲು ತಕ್ಷಣದ ಕ್ರಮ ಕೈಗೊಂಡಿದ್ದಾರೆ.


ಮಳೆಯ ಪರಿಣಾಮವಾಗಿ ರಸ್ತೆಯುದ್ದಕ್ಕೂ ಬಿದ್ದಿದ್ದ ಗುಂಡಿಗಳಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಕೇಳಿಬಂದ ದೂರುಗಳಿಗೆ ತಕ್ಷಣ ಸ್ಪಂದಿಸಿದ ಶಾಸಕರು, ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕರ ಸೂಚನೆಯ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಂಡಿದ್ದಾರೆ. ರಸ್ತೆಯ ಹೊಂಡ-ಗುಂಡಿಗಳಿಗೆ ವೆಟ್ ಮಿಕ್ಸ್ (Wet Mix) ಹಾಕಿ, ರಸ್ತೆಯನ್ನು ಸಮತಟ್ಟುಗೊಳಿಸುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.









