ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

0

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಮಾಹಿತಿ ಆಧಾರಿತ ಓರಿಯೆಂಟೇಶನ್ ಕಾರ್ಯಕ್ರಮ ಜೂ. 16ರಂದು ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಕಾಲೇಜಿನ ನೀತಿ ನಿಯಮಗಳನ್ನು ತಿಳಿಸಿದರು.
ಲೆಕ್ಕಶಾಸ್ತ್ರ ಉಪನ್ಯಾಸಕಿ ಸುಷ್ಮಾ ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ ನಿರೂಪಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ನಂದಿನಿ ಶರ್ಮಾ ವಂದಿಸಿದರು.

LEAVE A REPLY

Please enter your comment!
Please enter your name here