






ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಲಭ್ಯ ಮಾಹಿತಿಯ ಪ್ರಕಾರ, ವೃದ್ಧರು ರಸ್ತೆ ದಾಟುತ್ತಿದ್ದ ವೇಳೆ ಬಂದ ಇಕೋ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ.ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.









