ನ್ಯಾಯಾಧೀಶರಾದ ರಾಮಲಿಂಗಪ್ಪ ಶಶಾಂಕ್ ನಾಗೇಂದ್ರ ಭಟ್ ಕರ್ತವ್ಯಕ್ಕೆ ಹಾಜರ್

0

ಬೆಳ್ತಂಗಡಿ: ಬೆಳ್ತಂಗಡಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ಹಾಗೂ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿರುವ ಶಶಾಂಕ್ ನಾಗೇಂದ್ರ ಭಟ್ ಅವರು ಜೂ.೧೫ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು.

LEAVE A REPLY

Please enter your comment!
Please enter your name here