ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ “ಯೋಗ ಮಾಡಿ ಆರೋಗ್ಯ ಕಾಪಾಡಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 20ರಂದು ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ವಿಜಯ. ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿದರು.

ಸಹ ಶಿಕ್ಷಕಿಯಾದ ರೇಷ್ಮಾ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟು, ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ನಂತರ ಮುಖ್ಯೋಪಾಧ್ಯಾಯಿನಿ ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿ, ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಪ್ರಾಂಶುಪಾಲರಾದ ಶ್ರೀಯುತ ಜೋಸ್ಟನ್ ಲೋಬೊ ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಅದರ ಪಾತ್ರದ ಕುರಿತು ತಿಳಿ ಹೇಳಿದರು.ಅನಂತರ ದೈಹಿಕ ಶಿಕ್ಷಣ ಶಿಕ್ಷಕಿ ಹರೀಣಾಕ್ಷಿಯವರು ವಿದ್ಯಾರ್ಥಿಗಳಿಗೆ ಯೋಗದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಮತ್ತು ತರಗತಿವಾರು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಯೋಗ ಆಸನಗಳನ್ನು ಮಾಡಿಸಿದರು .

ಯೋಗವನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕೆಂದು ಪ್ರತಿಜ್ಞೆ ಸ್ವೀಕರಿಸಲಾಯಿತು . ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here