






ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವು ಜೂ.20 ರಂದು ಶಾಲೆಯ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ. ಶಶಾಂಕ್ ನಾಗೇಂದ್ರ ಭಟ್ ಅವರು ನೆರವೇರಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಮೀರ್ ಸಹದಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.


ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಚಿದಾನಂದ ಟಿ. ಅವರು ಭಾಗವಹಿಸಿ, ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು, ಮಕ್ಕಳ ಹಕ್ಕುಗಳು ಹಾಗೂ ಸಂಬoಧಿತ ಕಾನೂನುಗಳ ಕುರಿತು ಅರಿವು ಮೂಡಿಸಿದರು.ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೊ, ಪ್ರಧಾನ ಕಾರ್ಯದಶಿ ಪ್ರಶಾಂಕ್ ಎಂ. ಭಾಗವಹಿಸಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.









