ಕರಾಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಕರಾಯ: ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಲಾಯಿತು. ಆಯುಷ್ ಇಲಾಖೆ, ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ ಹಾಗೂ ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಕಿನ್ನರ ಮಕ್ಕಳು ಸಾಂಪ್ರದಾಯಿಕವಾಗಿ ದೀಪ ಪ್ರಜ್ವಲನೆ ಮಾಡುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಕರಾಯ ಘಟಕದ ಬಾಲಕೃಷ್ಣ ಕುಲಾಲ್, ಮಂಜುನಾಥ್ ಶಾಮಿಯಾನದ ಮಾಲೀಕ ಉಮೇಶ್ ಸಾಲಿಯಾನ್ ಹಾಗೂ ಪ್ರಮುಖರಾದ ಗಂಗಾಧರ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ತಣ್ಣೀರುಪಂಥ ಆಯುಷ್ ಇಲಾಖೆಯ ಯೋಗ ತರಬೇತುದಾರ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಹಾಗೂ ಗಣ್ಯರಿಗೆ ವಿವಿಧ ಯೋಗಾಸನಗಳ ತರಬೇತಿಯನ್ನು ನೀಡಿ, ದೈನಂದಿನ ಜೀವನದಲ್ಲಿ ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಉಪಸ್ಥಿತರಿದ್ದ ನೂರಾರು ಯೋಗಾಸಕ್ತರು ಉತ್ಸಾಹದಿಂದ ಯೋಗಾಭ್ಯಾಸ ನಡೆಸಿದರು. ಕಾರ್ಯಕ್ರಮದ ನಿರೂಪಣೆಯನ್ನು ರಾಜಶೇಖರ್ ರೈ ಪೆರೋಡಿ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here