ಬೆಳ್ತಂಗಡಿ: ಬಿಜೆಪಿ ಮಹಿಳಾ ಮೋರ್ಚಾದಿಂದ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ‘ಬೆಂಕಿ ರಹಿತ ಅಡುಗೆ’ ಪ್ರಾತ್ಯಕ್ಷಿಕೆ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಇಲ್ಲಿನ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ‘ಬೆಂಕಿ ರಹಿತ ಅಡುಗೆ’ (ಫೈರ್‌ಲೆಸ್ ಕುಕ್ಕಿಂಗ್) ಮಾಡುವುದನ್ನು ಕಲಿಸಿಕೊಡುವುದರ ಜೊತೆಗೆ, ದೈನಂದಿನ ಜೀವನದಲ್ಲಿ ಹಸಿ ತರಕಾರಿಗಳ ಮಹತ್ವ ಹಾಗೂ ಅವುಗಳಿಂದ ಸಿಗುವ ಪೌಷ್ಟಿಕಾಂಶಗಳ ಬಗ್ಗೆ ಪ್ರಾಯೋಗಿಕವಾಗಿ ಪ್ರಾತ್ಯಕ್ಷಿಕೆಯನ್ನು ನೀಡಿ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತುಳಸಿ ಉಮೇಶ್, ಕೋಶಾಧಿಕಾರಿ ಸಂಗೀತ ಅರುಣ್ ಶೆಟ್ಟಿ ಸೇರಿದಂತೆ ವಸತಿ ನಿಲಯದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here