ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅರ್ಥಪೂರ್ಣ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0

ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉದ್ಘಾಟಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗಣಿತ ವಿಭಾಗದ ಮುಖ್ಯಸ್ಥರಾದ ಹೇಮಲತಾ ಎನ್ ಅವರು ಯೋಗದ ಮಹತ್ವ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ವಾಣಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ರಾಷ್ಟ್ರೀಯ ಯೋಗ ಚಾಂಪಿಯನ್ ಮೋಹಿತ್ ಗೌಡ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಿಯಮಿತವಾಗಿ ಯೋಗಾಭ್ಯಾಸ ಮಾಡುವ ಮೂಲಕ ಉತ್ತಮ ಆರೋಗ್ಯ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಳ್ಳಬಹುದೆಂದು ತಿಳಿಸಿದರು.ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು.

ವೇದಿಕೆಯಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಯು., ಸಹ ಕಾರ್ಯಕ್ರಮಾಧಿಕಾರಿ ಶ್ರಾವ್ಯ ಎಸ್. ಉಪಸ್ಥಿತರಿದ್ದರು.ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಮೌಲ್ಯ ಮತ್ತು ನಿಧಿ ಕಾರ್ಯಕ್ರಮ ನಿರೂಪಿಸಿದರು. ಎನ್‌.ಎಸ್‌.ಎಸ್ ಘಟಕ ನಾಯಕ ಕೈಲಾಶ್ ಸ್ವಾಗತಿಸಿದರು. ಎನ್‌.ಎಸ್‌.ಎಸ್ ಘಟಕ ನಾಯಕಿ ಇಂದುಮತಿ ವಂದಿಸಿದರು.

LEAVE A REPLY

Please enter your comment!
Please enter your name here