ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಸುಹಾಸ್ ಪೈ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವಿಶ್ವ ಯೋಗ ದಿನದ ಮಹತ್ವವನ್ನು ಮತ್ತು ಮನುಷ್ಯನ ದೇಹ ಮತ್ತು ಮನಸ್ಸು ಸದೃಢವಾಗಿ ಆರೋಗ್ಯಕರವಾಗಿ ಇರಲು ಪ್ರತಿಯೊಬ್ಬರು ದಿನನಿತ್ಯ ಯೋಗಾಭ್ಯಾಸವನ್ನು ಮಾಡಬೇಕೆಂದು ತಿಳಿಸಿದರು.

ಕಾಲೇಜಿನ ಯೋಗ ವಿದ್ಯಾರ್ಥಿಗಳಾದ ಪ್ರಜ್ವಲ್, ಕು.ಗೀತಾ, ಕು.ವೈಷ್ಣವಿಯವರು ಲಘು ವ್ಯಾಯಾಮ, ಪ್ರಾಣಾಯಾಮ, ಸೂರ್ಯ ನಮಸ್ಕಾರದ ಜೊತೆಗೆ ಹಲವು ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಶ್ರದ್ಧೆಯಿಂದ ಯೋಗಭ್ಯಾಸದಲ್ಲಿ ತೊಡಗಿದರು.

ಸಹಶಿಕ್ಷಕಿ ಮೇರಿ ಸುಜಾ ವಿಶ್ವ ಯೋಗ ದಿನಾಚರಣೆಯ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಕ್ಲಿಫರ್ಡ್ ಪಿಂಟೋ ಮಾರ್ಗದರ್ಶನ ನೀಡಿದರು. ಸಹಶಿಕ್ಷಕಿ ವಿನಿತಾ ಮೋರಸ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here