ಕರ್ನೋಡಿ ಲಾಯಿಲ ಸರಕಾರಿ ಶಾಲೆ: ನವೀಕರಣಗೊಂಡ ಎಲ್.ಕೆ.ಜಿ, ಯು.ಕೆ.ಜಿ ಕೊಠಡಿಗಳ ಭವ್ಯ ಉದ್ಘಾಟನೆ

0

ಲಾಯಿಲ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನವೀಕರಣಗೊಂಡ ಎಲ್.ಕೆ.ಜಿ (LKG) ಮತ್ತು ಯು.ಕೆ.ಜಿ (UKG) ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಜೂ22 ರಂದು ಜರುಗಿತು.

ನೂತನವಾಗಿ ನವೀಕರಣಗೊಂಡ ಕೊಠಡಿಗಳನ್ನು ಉಜಿರೆಯ ‘ಬದುಕು ಕಟ್ಟೋಣ ಬನ್ನಿ’ ಸೇವಾ ಟ್ರಸ್ಟ್‌ನ ಸಂಚಾಲಕ ಮೋಹನ್ ಕುಮಾರ್ ಉದ್ಘಾಟಿಸಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಅವರು ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಪುಟಾಣಿ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ಹಾಗೂ ಕೊಡೆಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.

ಕೊಠಡಿಯ ನವೀಕರಣಕ್ಕೆ ಆರ್ಥಿಕ ಹಾಗೂ ಸಾಂಸ್ಥಿಕವಾಗಿ ಸಹಕರಿಸಿದ ಉದಾರಿ ದಾನಿಗಳನ್ನು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ವೇದಿಕೆಯಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC ಅಧ್ಯಕ್ಷರಾದ ಸೌಮ್ಯಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಬೆಳ್ತಂಗಡಿ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಶ್ರೀಧರ್ ಕೆ.ವಿ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸಂತೋಷ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ತಾರಾನಾಥ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಧನಂಜಯ್ ರಾವ್ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಬಾಲಕೃಷ್ಣ ನೈಮಿಷಾ ಸೌತಡ್ಕ, ಪ್ರವೀಣ್ ಶೆಟ್ಟಿ, ವೆಂಕಟೇಶ್ ಕಾಶಿಬೆಟ್ಟು, ಬೆನಕಾ ಎಲೆಕ್ಟ್ರಿಕಲ್ಸ್‌ನ ಮುರಳಿ, ಪ್ರಕಾಶ್ ಜೈನ್ ಬಳೆಂಜ, ಮೊಹಮದ್ ಅಲೀ ಕಕ್ಕೇನ, ಸುಜಿತ್ ಗುರಿಂಗಾನ, ಕರೀಂ ಹಾಜಿ ಉಪಸ್ಥಿತರಿದ್ದರು.

ಅಲ್ಲದೆ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್ ಆರ್., ಕೋಶಾಧಿಕಾರಿ ಸದಾಶಿವ ಸಮಗಾರ, ಉಪಾಧ್ಯಕ್ಷ ಆಶ್ರಫ್ ಮಾಂಜಾಲ್, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಶ್ರೀಮತಿ ದಿವ್ಯ, ಸಂಘದ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಅಪಾರ ಸಂಖ್ಯೆಯ ವಿದ್ಯಾಭಿಮಾನಿಗಳು ಭಾಗವಹಿಸಿ ಕಾರ್ಯಕ್ರಮದ ಚಂದವನ್ನು ಹೆಚ್ಚಿಸಿದರು.

ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಧನಂಜಯ ರಾವ್ ಅವರು ಕಾರ್ಯಕ್ರಮದ ಆರಂಭದಲ್ಲಿ ಎಲ್ಲರನ್ನೂ ಸ್ವಾಗತಿಸಿದರು. ಸಹ ಶಿಕ್ಷಕಿ ಉಷಾ ಕೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಸಹ ಶಿಕ್ಷಕ ಕೃಷ್ಣ ಕುಮಾರ್ ಅವರು ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here