ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದಲ್ಲಿ ವಿದ್ಯಾರ್ಥಿಗಳಿಗೆ ಚೆಂಡೆ-ಮದ್ದಳೆ ತರಬೇತಿ ಆರಂಭ

0

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ 5 ನೇ ತರಗತಿಗಿಂತ ಮೇಲ್ಪಟ್ಟ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ಚೆಂಡೆ ಮತ್ತು ಮದ್ದಳೆ ತರಬೇತಿ ಶಿಬಿರವು ಜೂನ್ 21 ರಿಂದ ಯಶಸ್ವಿಯಾಗಿ ಪ್ರಾರಂಭಗೊಂಡಿದೆ.

ಈ ವಿಶೇಷ ತರಬೇತಿ ಶಿಬಿರವು ಖ್ಯಾತ ತರಬೇತುದಾರರಾದ ಶ್ರೀ ಹರಿ ದೇವಾಡಿಗ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಮುಂಬರುವ ಎರಡು ತಿಂಗಳುಗಳ ಕಾಲ ಈ ತರಬೇತಿ ಶಿಬಿರವು ನಿರಂತರವಾಗಿ ನಡೆಯಲಿದ್ದು, ಕಲೆ ಮತ್ತು ಸಂಗೀತದ ಬಗ್ಗೆ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

ತರಬೇತಿಯಲ್ಲಿ ಪಾಲ್ಗೊಳ್ಳಲು ಇನ್ನು ಕೂಡ ಮುಕ್ತ ಅವಕಾಶವಿದ್ದು, ಆಸಕ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಡೆಮಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here