ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

0

ವೇಣೂರು: ಇಲ್ಲಿನ ನಿಟ್ಟಡೆಯ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಜೂನ್ 22 ರಂದು ವಿಶ್ವ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು.

​ಕಾರ್ಯಕ್ರಮದಲ್ಲಿ ಕುಂಭಶ್ರೀ ಸಂಸ್ಥೆಯ ಯೋಗ ತರಬೇತುದಾರರಾದ ಸತೀಶ್ ಆಚಾರ್ಯ ಅವರು ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ಹಾಗೂ ಉತ್ತಮ ರೀತಿಯ ತರಬೇತಿಯನ್ನು ನೀಡಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ಅವರು ಮಾತನಾಡಿ, ದಿನನಿತ್ಯದ ಜೀವನದಲ್ಲಿ ಯೋಗ ಮಾಡುವುದರಿಂದ ಸಿಗುವ ಆರೋಗ್ಯಕರ ಪ್ರಯೋಜನಗಳು ಹಾಗೂ ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು.

​ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ. ಹೆಚ್., ಸಂಚಾಲಕರಾದ ಅಶ್ವಿತ್ ಕುಲಾಲ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಮಮತಾ ಶಾಂತಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್. ಎನ್. ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here