







ಮಂಗಳೂರು : ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಅವರು ಜು.23ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.


ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಮಂಗಳೂರು ಕೇಂದ್ರ ಜುಮಾ ಮಸ್ಜಿದ್ ನಲ್ಲಿ ಮೃತದೇಹದ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಝಿಯವರ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದ ಬಳಿಕ ದಫನ ಕಾರ್ಯದ ಸ್ಥಳ ನಿಗದಿಪಡಿಸಲಾಗುವುದು ಎಂದು ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ತಿಳಿಸಿದ್ದಾರೆ.









