






ಪುದುವೆಟ್ಟು: ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಉಜಿರೆ ಎಸ್.ಡಿ.ಎಂ. ಈಜು ಕೊಳದ ತರಬೇತುದಾರರು ಹಾಗೂ ಯೋಗ ತರಬೇತುದಾರ ಶೀನ ಯೋಗದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.


ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ಬಳಿಕ, ಅತಿಥಿ ಶೀನ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು ನೀಡಿ, ಅವುಗಳ ಪ್ರಯೋಜನಗಳ ಕುರಿತು ಮಾರ್ಗದರ್ಶನ ಮಾಡಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









