ಪುದುವೆಟ್ಟು: ಶ್ರೀಧ.ಮಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

0

ಪುದುವೆಟ್ಟು, ಜೂನ್ 23: ಸ್ಥಳೀಯ ಶ್ರೀಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜೂ.23 ರಂದು ಪೋಷಕರು ಮತ್ತು ಶಿಕ್ಷಕರ ಸಹಭಾಗಿತ್ವದಲ್ಲಿ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಶಾಲೆಯ ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಸುಧಾರಿಸುವ ಮತ್ತು ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸುಮಾರು 60ಕ್ಕೂ ಹೆಚ್ಚು ಪೋಷಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಶಾಲೆಯ ಆವರಣದಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸಿ, ಶಾಲಾ ಪರಿಸರವನ್ನು ಸುಂದರಗೊಳಿಸಲಾಯಿತು.ಈ ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಶಿಧರ ಜಿ ವಹಿಸಿದ್ದರು.

ಶಾಲೆಯ ಎಲ್ಲಾ ಶಿಕ್ಷಕರು ಈ ಶ್ರಮದಾನದಲ್ಲಿ ಭಾಗವಹಿಸಿ ಪೋಷಕರೊಂದಿಗೆ ಕೈಜೋಡಿಸಿದರು. ಸಮುದಾಯ ಮತ್ತು ಶಾಲೆಯ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸ್ತುತ್ಯಾರ್ಹ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

LEAVE A REPLY

Please enter your comment!
Please enter your name here