ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

0

ಬೆಳ್ತಂಗಡಿ, ಜೂನ್ 23: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಸೈನ್ಸ್ ಹಾಗೂ ಇಕೋ ಕ್ಲಬ್ ವತಿಯಿಂದ “Nurturing Nature Through Seed Balls” ಎಂಬ ವಿಶೇಷ ಚಟುವಟಿಕೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ, ಹಸಿರು ವಾತಾವರಣ ನಿರ್ಮಾಣ ಹಾಗೂ ಜೀವ ವೈವಿಧ್ಯದ ಮಹತ್ವದ ಕುರಿತು ಅರಿವು ಮೂಡಿಸುವುದಾಗಿತ್ತು.

ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಎಂ. ಆರ್ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸೈನ್ಸ್ ಮತ್ತು ಇಕೋ ಕ್ಲಬ್‌ನ ಶಿಕ್ಷಕಿ ಸೌಮ್ಯ ಪಿ, ನಯನ ಹಾಗೂ ಪ್ರಮೀಳಾ ಎನ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂ ಶಾಲೆಯ ಸಹಶಿಕ್ಷಕಿ ಸೌಮ್ಯ ಪಿ ಬೀಜ ಉಂಡೆಗಳ ತಯಾರಿಕೆ, ಅವುಗಳ ಉಪಯೋಗ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅವುಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಬೀಜ ಉಂಡೆಗಳನ್ನು ತಯಾರಿಸಿ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದರು.

ಈ ಚಟುವಟಿಕೆಯ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಪ್ರೀತಿ, ಪರಿಸರದ ಜವಾಬ್ದಾರಿ ಹಾಗೂ ಮರಗಳ ಸಂರಕ್ಷಣೆಯ ಅಗತ್ಯತೆಯ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here