ಅಳದಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಹಾಗೂ ವಿವಿಧ ಸಂಘಗಳ ಉದ್ಘಾಟನೆ

0

ಅಳದಂಗಡಿ: ಸರಕಾರಿ ಪ್ರೌಢಶಾಲೆಯಲ್ಲಿ ಜೂ.20 ಶನಿವಾರದಂದು ಶಾಲಾ ವಿದ್ಯಾರ್ಥಿ ಸಂಸತ್ ಹಾಗೂ ಇತರ ಜಂಟಿ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿ ಮರಿಯಾ ಸಲ್ದಾನ ಅವರು ವಹಿಸಿದ್ದರು. ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ ಮತ್ತು ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವಿದ್ಯಾರ್ಥಿ ಜೀವನದಲ್ಲಿ ಇಂತಹ ಸಂಘಟನೆಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.ಶಾಲೆಯ ಗಣಿತ ಶಿಕ್ಷಕರಾದ ಉಮೇಶ್ ಸರ್ ಅವರು ವಿದ್ಯಾರ್ಥಿ ಸಂಸತ್ತಿನ ಮಹತ್ವ ಹಾಗೂ ಮಂತ್ರಿಗಳು ಹೊಂದಿರಬೇಕಾದ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಸಮಾಜ ವಿಜ್ಞಾನ ಶಿಕ್ಷಕರಾದ ಚಂದ್ರಶೇಖರ ರಾವ್ ಕೆ ರವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರಲ್ಲದೆ, ನೂತನ ಮಂತ್ರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕಿಯಾದ ಶೋಭಾ ಟೀಚರ್ ಅವರು ಎಲ್ಲರಿಗೂ ಧನ್ಯವಾದ ಸಮರ್ಪಣೆ ಮಾಡಿದರು. ವೇದಿಕೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು, ದ್ವಿತೀಯ ದರ್ಜೆ ಸಹಾಯಕಿ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಚಂದವನ್ನು ಹೆಚ್ಚಿಸಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.SDMC ಸದಸ್ಯರಾದ ಕೆ ಧನ ಕೀರ್ತಿ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here